ಜ.7ರ ಭಾನುವಾರದಂದು ವಿವಿಧ ಮಠಗಳ ಮಠಾಧೀಶರನ್ನು ಒಳಗೊಂಡಂತೆ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಗರದ ಶ್ರೀ ಕ್ಷೇತ್ರ ದೊಡ್ಡ ಮಠದ 5ನೇ ವರ್ಷದ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವವನ್ನ ಅಯೋಜನೆ ಮಾಡಲಾಗಿದೆ ಎಂದು ದೊಡ್ಡ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ತಿಳಿಸಿದರು.
ನಗರದ ದೊಡ್ಡಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಪ್ರತಿಮೆಯನ್ನು ಮೆರವಣಿಗೆಯ ಮುಖಾಂತರ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದಲ್ಲಿರುವ ಶ್ರೀ ಕ್ಷೇತ್ರ ದೊಡ್ಡ ಮಠಕ್ಕೆ ಆಗಮಿಸಲಿದೆ. ದೊಡ್ಡಮಠದ ಮರುಳ ಶಂಕರೇಶ್ವರ ಗದ್ದುಗೆ ದೇವಾಲಯಕ್ಕೆ ಬರಮಾಡಿಕೊಂಡು ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದರು.
ನಂತರ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜ್ಞಾನ ದಾಸೋಹ, ನೋಟ್ ಬುಕ್ ವಿತರಣೆ, ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮಹಾಲಿಂಗ್ಯ, ಮುತ್ತಣ್ಣ, ಮೃತ್ಯುಂಜಯ, ಮಂಜುನಾಥ್ ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…