ಮೊಬೈಲ್ ಟವರ್ ಗಳಿಗೆ ಪವರ್ ಸರಬರಾಜು ಮಾಡುವ ಕೇಬಲ್ ಕಳವು ಆಗಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಒಂದೇ ದಿನ ಕೊಡಿಗೇಹಳ್ಳಿ, ತಿಪ್ಪಾಪುರ, ವೀರಾಪುರ, ಚಪ್ಪರದಕಲ್ಲು, ರೈ ಯೂನಿರ್ವಸಿಟಿ ಸಮೀಪದಲ್ಲಿ ಅಳವಡಿಸಿದ್ದ ಪವರ್ ಕೇಬಲ್ ನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ.
ಸುಮಾರು 60-70ಮೀ. ಕೇಬಲ್ ಒಳಭಾಗದ ತಾಮ್ರದ ತಂತಿಯನ್ನು ಕದ್ದಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಈ ಕೇಬಲ್ ಏರ್ಟೆಲ್, ವೊಡಾಫೋನ್, ಜಿಯೋ ಟವರ್ ಗಳಿಗೆ ಪವರ್ ಸರಬರಾಜು ಮಾಡುತ್ತಿದ್ದವು, ಇದೀಗ ಖದೀಮರು ರಾತ್ರೋರಾತ್ರಿ ಬಂದು ಪವರ್ ಕೇಬಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಕೂಡಲೇ ಕಳ್ಳರನ್ನು ಪತ್ತೆ ಮಾಡಬೇಕೆಂದು ಸಿಬ್ಬಂದಿ ಮೂರ್ತಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…