ದೊಡ್ಡಬಳ್ಳಾಪುರ: ಟಾಟಾ ಏಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ದ್ವಿಚಕ್ರ ವಾಹನ ಸವಾರ ನೆಲ್ಲುಗುದಿಗೆ ಗ್ರಾಮದ ಮುನಿಕೃಷ್ಣ (50) ಮೃತರಾಗಿದ್ದಾರೆ.
ಆಗಸ್ಟ್ 29 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಅಪಘಾತ ನಡೆದಿತ್ತು. ಅಪಘಾತದ ದೃಶ್ಯ ಸ್ಥಳಿಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಮುನಿಕೃಷ್ಣ ಮತ್ತು ನರಸಿಂಹಯ್ಯ ಎಂಬುವವರು ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ನೆಲುಗುದಿಗೆ ಗ್ರಾಮದ ಮುನಿಕೃಷ್ಣ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.