ಟಾಟಾ 407 ಗೂಡ್ಸ್ ವಾಹನಕ್ಕೆ ಬೊಲೆರೋ ಗೂಡ್ಸ್ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಟಾಟಾ 407 ಗೂಡ್ಸ್ ವಾಹನ ಮೊಗಚಿ ಬಿದ್ದಿದೆ. ಸ್ಥಳದಲ್ಲಿಯೇ ಟಾಟಾ 407 ಗೂಡ್ಸ್ ವಾಹನ ಚಾಲಕ ಸಾವನಪ್ಪಿದನೆ.
ಈ ಘಟನೆ ತಡರಾತ್ರಿ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಮೃತ ಟಾಟಾ 407 ಗೂಡ್ಸ್ ವಾಹನದ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲೆ ದೊಡ್ಡ ಮಾರಹಳ್ಳಿ ಗ್ರಾಮದ ದೇವರಾಜ್ (35) ಎಂದು ಗುರುತಿಸಲಾಗಿದೆ.
ಟಾಟಾ 407 ಗೂಡ್ಸ್ ವಾಹನ ಮತ್ತು ಬೊಲೆರೋ ಗೂಡ್ಸ್ ವಾಹನ ದಾಬಸ್‌ಪೇಟೆ ಯಿಂದ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದು, ರಾಷ್ಟ್ರೀಯ ಕೂಗೇನಹಳ್ಳಿ ಗೇಟ್ ಬಳಿ ಬೊಲೆರೋ ವಾಹನ ಹಿಂದಿನಿಂದ ಡಿಕ್ಕಿ ಹೊಡೆದ ವೇಳೆ ಟಾಟಾ 407 ನಿಯಂತ್ರಣ ತಪ್ಪಿ ಬಲ ಭಾಗಕ್ಕೆ ಮೊಗಚಿ ಬಿದ್ದಿದೆ.
ಇನ್ನು ಘಟನೆಯಲ್ಲಿ ಬೊಲೆರೋ ವಾಹನ ಕೂಡ ಹಳ್ಳಕ್ಕೆ ಬಿದ್ದಿದ್ದು, ಚಾಲಕ ಮತ್ತು ಸಹಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…