
TAPMCS Election: ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿಯ ಚುನಾವಣೆ ಬಹಳ ಭರ್ಜರಿಯಾಗಿ ನಡೆಯುತ್ತಿದೆ. ಐದು ಸಾವಿರಕ್ಕೂ ಹೆಚ್ಚು ಮತದಾರರಿದ್ದು, ಎಲ್ಲಾ ಮತದಾರರು ಸ್ವಯಂಪ್ರೇರಿತರಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಭಾಗಹಿಸುತ್ತಿದ್ದಾರೆ. ಎನ್ ಡಿಎ ಬೆಂಬಲಿತ 8 ಅಭ್ಯರ್ಥಿಗಳ ಪರವಾಗಿ ಮತದಾರರು ಒಂದೇ ತೀರ್ಮಾನದಿಂದ ಒಲವು ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಳೆದ ವಾರದಿಂದ ಶ್ರಮಪಟ್ಡಿದ್ದಾರೆ. ಎನ್ ಡಿಎ ಅಭ್ಯರ್ಥಿಗಳೆಲಾ ಗೆಲ್ಲುವ ನಿರೀಕ್ಷೆ ಇದೆ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದ್ದಾರೆ.
ಎನ್ ಡಿಎ ಕೂಟದಲ್ಲಿ ಬಿರುಕಿದೆ ಎಂದು ಕಾಂಗ್ರೆಸ್ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಬಿರುಕಿಲ್ಲ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಪಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..