ಟಿಎಪಿಎಂಸಿಎಸ್ ಚುನಾವಣೆ: ಎಎನ್ ಡಿಎ ಒಗ್ಗಟ್ಟು- ಎಲ್ಲಾ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್

TAPMCS Election: ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿಯ ಚುನಾವಣೆ ಬಹಳ ಭರ್ಜರಿಯಾಗಿ ನಡೆಯುತ್ತಿದೆ. ಐದು ಸಾವಿರಕ್ಕೂ ಹೆಚ್ಚು ಮತದಾರರಿದ್ದು, ಎಲ್ಲಾ ಮತದಾರರು ಸ್ವಯಂಪ್ರೇರಿತರಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ‌ ಭಾಗಹಿಸುತ್ತಿದ್ದಾರೆ. ಎನ್ ಡಿಎ ಬೆಂಬಲಿತ‌ 8 ಅಭ್ಯರ್ಥಿಗಳ ಪರವಾಗಿ ಮತದಾರರು ಒಂದೇ ತೀರ್ಮಾನದಿಂದ ಒಲವು ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಳೆದ ವಾರದಿಂದ ಶ್ರಮಪಟ್ಡಿದ್ದಾರೆ. ಎನ್ ಡಿಎ ಅಭ್ಯರ್ಥಿಗಳೆಲಾ ಗೆಲ್ಲುವ ನಿರೀಕ್ಷೆ ಇದೆ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದ್ದಾರೆ.

ಎನ್ ಡಿಎ ಕೂಟದಲ್ಲಿ ಬಿರುಕಿದೆ ಎಂದು ಕಾಂಗ್ರೆಸ್ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಬಿರುಕಿಲ್ಲ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಪಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

56 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

5 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

6 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

12 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

12 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago