ಟಿಎಪಿಎಂಸಿಎಸ್ ಚುನಾವಣೆ: ಕಾಂಗ್ರೆಸ್ ನ‌ ಗೆಲುವು ಶತಸಿದ್ಧ- ಕೆಪಿಸಿಸಿ ಸದಸ್ಯ ಜಿ‌.ಲಕ್ಷ್ಮೀಪತಿ

ಇಂದು ಟಿಎಪಿಎಂಸಿಎಸ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಅದೇರೀತಿ‌ ಕೊನೆಗಳಿಯ ಕಸರತ್ತುಗಳನ್ನು ಆಯಾ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ನಡೆಸುತ್ತಿದ್ದಾರೆ. ಹಾಗೇ ಮತದಾರರು ಸಹ ಅಷ್ಟೇ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..

ಬೆಳಗ್ಗೆ 11 ಗಂಟೆ ನಂತರ ಮತದಾನ ಚುರುಕುಗೊಂಡಿದೆ. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಲಕ್ಷೀಪತಿ ಅವರು, ಮತದಾರರ ಒಲವು ನೋಡಿ ಹರ್ಷ ವ್ಯಕ್ತಪಡಿಸಿ, ಕಾಂಗ್ರೆಸ್ ನ‌ ಗೆಲುವು ಶತಸಿದ್ಧ ಎಂದು ಹೇಳಿದರು.

ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ‘ಎ’ ತರಗತಿ ಐದು ಸ್ಥಾನಗಳನ್ನು ಗೆಲ್ಲುವ‌ ಸಂಪೂರ್ಣ ಭರವಸೆ ಇದೆ. ಇವುಗಳನ್ನು ಹೊರತುಪಡಿಸಿ ಸರ್ಕಾರದಿಂದ ನಾಮನಿರ್ದೇಶನ ಸ್ಥಾನ, ಪಿಎಲ್ ಡಿ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿ ನಮ್ಮದೇ ಆಗಿವೆ. ಈ ಹಿನ್ನೆಲೆ ಕಾಂಗ್ರೆಸ್ ಟಿಎಪಿಎಂಸಿಎಸ್ ಚುಕ್ಕಾಣಿ ಹಿಡಿದೇ ಹಿಡುಯುತ್ತದೆ ಎಂದು ಹೇಳಿದರು…

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

35 minutes ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

13 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

13 hours ago