Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

5 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

23 hours ago