ಟಿಪ್ಪರ್ ಲಾರಿ ಬೈಕ್ ಸವಾರನ ಮೇಲೆ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಸಮೀಪದ ಗೋವರ್ಧನ್ ಫ್ಯಾಕ್ಟರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಬೈಕ್ ಸವಾರನ ಮೇಲೆ ಹರಿದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತರನ್ನು ದೇವನಹಳ್ಳಿ ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ (60) ಎಂದು ಗುರುತಿಸಲಾಗಿದೆ.

ಟಿಪ್ಪರ್ ಲಾರಿಯ ಚಕ್ರ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಗಂಭೀರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯ ಚಾಲನೆಯ ಕಾರಣದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ, ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

13 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

15 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

18 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

20 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

22 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago