ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನ ತಲೆಗೆ ಬಲವಾದ ಪೆಟ್ಟಾಗಿರುವ ಘಟನೆ ದೊಡ್ಡಬಳ್ಳಾಪುರ ಹಾಗೂ ಜಿಲ್ಲಾಧಿಕಾರಿ ಕಚೇರಿ ಮಾರ್ಗ ಮಧ್ಯೆ ಬರುವ ಆಲೂರುದುದ್ದನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಆನಂದ್(40), ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.
ಘಟನೆ ಹೆದ್ದಾರಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿ ರಭಸಕ್ಕೆ ಆನಂದ್ ಅವರ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಯಿತು.
ಆನಂದ್ ಅವರು ದೊಡ್ಡಬಳ್ಳಾಪುರ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇಂದು ಬೆಳಗ್ಗೆ ಮನೆಯಿಂದ ಕಚೇರಿಗೆ ಬರುವ ವೇಳೆ ಘಟನೆ ನಡೆದಿದೆ.
