ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನ ತಲೆಗೆ ಬಲವಾದ ಪೆಟ್ಟಾಗಿರುವ ಘಟನೆ ದೊಡ್ಡಬಳ್ಳಾಪುರ ಹಾಗೂ ಜಿಲ್ಲಾಧಿಕಾರಿ ಕಚೇರಿ ಮಾರ್ಗ ಮಧ್ಯೆ ಬರುವ ಆಲೂರುದುದ್ದನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನಡೆದಿದೆ.

ದೇವನಹಳ್ಳಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಆನಂದ್(40), ‌ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.

ಘಟನೆ‌ ಹೆದ್ದಾರಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿ ರಭಸಕ್ಕೆ ಆನಂದ್ ಅವರ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಯಿತು.

ಆನಂದ್ ಅವರು ದೊಡ್ಡಬಳ್ಳಾಪುರ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇಂದು ಬೆಳಗ್ಗೆ ಮನೆಯಿಂದ ಕಚೇರಿಗೆ ಬರುವ ವೇಳೆ ಘಟನೆ ನಡೆದಿದೆ.

ಹೈವೆಗಳಲ್ಲಿ ಟಿಪ್ಪರ್ ಲಾರಿಗಳ ಚಾಲಕರು ಮನಸೋಇಚ್ಛೆ ವಾಹನ ಚಾಲನೆ ಮಾಡುತ್ತಿದ್ದಾರೆ. ಇದರಿಂದ ಇತರೆ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಪೊಲೀಸರು ಇದಕ್ಕೆ ಕಡಿವಾಣ ಹಾಕಿ, ವಾಹನ‌ ಸವಾರರ ಪ್ರಾಣ ಉಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago