ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಳವು ಕೃತ್ಯ ಸಮೀಪದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮಾಹಿತಿಯ ಪ್ರಕಾರ, ವಾಹನ ಮಾಲೀಕರು ಡಿ.ಕ್ರಾಸ್‌ನಲ್ಲಿರುವ ಬಾರ್‌ವೊಂದರ ಮುಂದೆ ತಮ್ಮ ಟಿವಿಎಸ್ ಎಕ್ಸ್‌ಎಲ್-100 ಅನ್ನು ನಿಲ್ಲಿಸಿ ಒಳಗೆ ತೆರಳಿದ್ದರು. ಕೆಲವೇ ನಿಮಿಷಗಳಲ್ಲಿ ಹೊರಬಂದು ನೋಡಿದಾಗ ವಾಹನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ತಕ್ಷಣವೇ ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಳ್ಳನು ಮೊದಲೇ ಎಕ್ಸ್‌ಎಲ್ ವಾಹನವನ್ನು ಗುರಿಯಾಗಿಸಿಕೊಂಡು ಪ್ರದೇಶದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಜೇಬಿನಲ್ಲಿ ಕೀ ಇಟ್ಟುಕೊಂಡು ಹೊಂಚು ಹಾಕುತ್ತಿದ್ದ ಆತ, ವಾಹನ ಮಾಲೀಕರು ವಾಹನ ನಿಲ್ಲಿಸಿ ತೆರಳುತ್ತಿದ್ದಂತೆಯೇ ಅದನ್ನು ಕಳವು ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಸಿಸಿಟಿವಿ ದೃಶ್ಯಗಳ ಪ್ರಕಾರ, ಕಳ್ಳನು ಕಳವು ಮಾಡಿದ ವಾಹನದಲ್ಲಿ ಡಿ ಕ್ರಾಸ್ ಬಳಿ ಯೂ-ಟರ್ನ್ ಪಡೆದು ಟಿಬಿ ವೃತ್ತದ ಕಡೆಗೆ ತೆರಳಿರುವುದು ದಾಖಲಾಗಿದೆ.

ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

8 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

10 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

13 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

14 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

21 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

21 hours ago