ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.
ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.
ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…