ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಧಿಕೃತವಾಗ ನೇಮಕ
ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷವಾಗುತ್ತದೆ. ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟ್ ನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಪಾತ್ರಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಭಾರತೀಯ ಕ್ರಿಕೆಟನ್ನು ಮುನ್ನಡೆಸಲು ಗೌತಮ್ ಆದರ್ಶ ವ್ಯಕ್ತಿ ಎಂದು ನನಗೆ ವಿಶ್ವಾಸವಿದೆ. ಅವರು ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಬಿಸಿಸಿಐ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅಧಿಕಾರಾವಧಿ ಕೊನೆಗೊಂಡಿತ್ತು. ಇದಾದ ಬಳಿಕ ಭಾರತ ತಂಡ ಶ್ರೇಷ್ಠ ಕೋಚ್‌ಗಾಗಿ ಹುಡುಕಾಟ ನಡೆಸಿತ್ತು. 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್‌ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸದಾ ಆಕ್ರಮಣಕಾರಿ ಆಟ ಹಾಗೂ ಮನೋಭಾವ ಹೊಂದಿರುವ ಗೌತಮ್ ಗಂಭೀರ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ತಂಡವನ್ನು ಚಾಂಪಿಯನ್ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು.
ಭಾರತದ ಮುಖ್ಯ ಕೋಚ್ ಆಗುವ ಮೂಲಕ 2025 ನೇ ಸಾಲಿನಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ, ಇಂಗ್ಲೇಂಡ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ 2026 ರಲ್ಲಿ ತವರಿನಲ್ಲಿ ನಡೆಯುವ ಟೆ-ಟ್ವೆಂಟಿ ವಿಶ್ವಕಪ್ ಗೆಲ್ಲುವುದು ಅವರ ಮುಂದಿನ ಸವಾಲಾಗಿದೆ.
ಹಿರಿಯ ಹಾಗೂ ಕಿರಿಯ ಆಟಗಾರರನ್ನು ಜೊತೆ ಜೊತೆಗೆ ಕರೆದುಕೊಂಡು ಹೋಗುವ ಹಾಗೂ ಅವರಲ್ಲಿನ ಪ್ರತಿಭೆ ಗುರುತಿಸಿ ತಂಡವನ್ನು ಚಾಂಪಿಯನ್ ಮಾಡುವುದು ಗೌತಮ್ ಗಂಭೀರ್ ಅವರಿಗಿರುವ ಬಹು ದೊಡ್ಡ ಜವಾಬ್ದಾರಿಯಾಗಿದೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…