Categories: ಟೆನಿಸ್

ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ರೋಹನ್ ಬೋಪಣ್ಣ

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ, ಭಾರತದ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.

ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.  ಮೂಲತಃ ಕೊಡಗಿನ ಮಾದಪುರ ಗ್ರಾಮದ ನಿವಾಸಿಯಾದ ಮಚ್ಚಂಡ ಭೂಪಣ್ಣ ಹಾಗೂ ಮಲ್ಲಿಕಾ ದಂಪತಿಯ ಪುತ್ರನಾಗಿದ್ದಾರೆ.

ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್​ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್​ ಡಬಲ್ಸ್​ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್​ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್​) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.

ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

6 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

7 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

20 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

21 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

21 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago