ಟೆಸ್ಟ್ ಸರಣಿ ಜಯಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಅಹಮದಾಬಾದ್ : ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚಿದ ಎರಡೂ ತಂಡಗಳ ಬ್ಯಾಟ್ಸ್‌ಮನ್ ಗಳ ಫಲವಾಗಿ ನಾಲ್ಕನೇ ಪಂದ್ಯದಲ್ಲಿ ಡ್ರಾ ಸಾಧಿಸಿ ಸರಣಿಯನ್ನು 2-1 ಅಂತರದಲ್ಲಿ ಗೆದ್ದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆಯಿಟ್ಟಿದೆ.

ಅಹಮದಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಪಂದ್ಯದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಚಾಲನೆ ನೀಡಿ ಕೆಲ ಸಮಯ ಪಂದ್ಯವನ್ನು ವೀಕ್ಷಣೆ ಮಾಡಿದ್ದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ ಉತ್ತಮ ಆರಂಭ ಪಡೆಯಿತು, ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ ಅವರ 180 ರನ್ ಹಾಗೂ ಕೆಮರೂನ್ ಗ್ರೀನ್ ಅವರ 114 ರನ್ ಗಳ ಉಪಯುಕ್ತ ದ್ವಿಶತಕದ ಜೊತೆಯಾಟದ ನೆರವಿನಿಂದ ತಂಡದ ಮೊತ್ತ 480 ರನ್ ಗಳಿಸಿದರು. ಭಾರತದ ಪರವಾಗಿ ಅಶ್ವಿನ್ 6 ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರ 126 ರನ್ ಹಾಗೂ ವಿರಾಟ್ ಕೊಹ್ಲಿ ಅವರ 186 ರನ್ ಸೊಗಸಾದ ಶತಕದ ಎದುರು ಮಂಕಾದ ಆಸೀಸ್ ಪಡೆ ವಿಕೆಟ್ ಪಡೆಯಲು ಪರದಾಡಿದರು, ನಾಯಕ ರೋಹಿತ್ ಶರ್ಮಾ 35, ಚತೇಶ್ವರ ಪೂಜಾರ 42, ಅಕ್ಷರ್ ಪಟೇಲ್ 79 ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಶ್ರೀಕರ್ ಭರತ್ 44 ರನ್ ಕಾಣಿಕೆ ನೀಡಿದರು ಇದರ ಫಲವಾಗಿ ಭಾರತ 571 ರನ್ ಗಳಿಸಿ 90ರನ್ ಮುನ್ನಡೆ ಸಾಧಿಸಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಬೃಹತ್ ಮೊತ್ತದ ಮುನ್ಸೂಚನೆ ನೀಡಿತು ಕೊನೆಯ ದಿನವಾದ್ದರಿಂದ ಉಭಯ ತಂಡಗಳ ನಾಯಕರು ಪಂದ್ಯ ಡ್ರಾ ಮಾಡಿಕೊಂಡರು. ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಆಪ್ ಸ್ಪಿನ್ನರ್ ಆರ್ ಅಶ್ವಿನ್ ಜಂಟಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Leave a Reply

Your email address will not be published. Required fields are marked *