ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ಸಿನ ಟೈರ್ ಆಕಸ್ಮಿಕವಾಗಿ ಬ್ಲಾಸ್ಟ್ ಆಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ಎಚ್ 50 ರಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ಬೆಂಕಿ ವ್ಯಾಪಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಗಾಬರಿಗೊಂಡ ಪ್ರಯಾಣಿಕರು ಕೆಳಗಿಳಿದು ತಮ್ಮ ಪ್ರಾಣ ಕಾಪಾಡಿಕೊಂಡಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಪ್ರಯಾಣಿಕರ ಲಗೇಜ್, ಬೆಲೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕದಳ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…