ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಟೈಲರಿಂಗ್ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 2024 ಮಾಚ್೯ 21 ಗುರುವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದಶ೯ನದಲ್ಲಿ ನೇರವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಿ ತಮ್ಮ ಹೆಸರನ್ನು ನೊಂದಾಯಿಸಕೊಳ್ಳಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ತರಬೇತಿಯು 2024 ಮಾಚ್೯ 29 ಶುಕ್ರವಾರದಿಂದ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 9535774621 ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,
https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…