ಟೈಲರಿಂಗ್ ಉಚಿತ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಟೈಲರಿಂಗ್ ಉಚಿತ  ತರಬೇತಿ  ಶಿಬಿರ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 2024  ಮಾಚ್೯ 21 ಗುರುವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದಶ೯ನದಲ್ಲಿ ನೇರವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಿ ತಮ್ಮ ಹೆಸರನ್ನು ನೊಂದಾಯಿಸಕೊಳ್ಳಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ತರಬೇತಿಯು 2024 ಮಾಚ್೯  29 ಶುಕ್ರವಾರದಿಂದ ಪ್ರಾರಂಭವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 9535774621 ಸಂಪರ್ಕಿಸಬಹುದಾಗಿದೆ.

ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,

 https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

11 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

21 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago