ಟೊಮ್ಯಾಟೋ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ

2024ನೇ ಸಾಲಿನ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಿದೆ. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ(AIC) ರವರನ್ನು ಆಯ್ಕೆ ಮಾಡಿರುತ್ತಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮ್ಯಾಟೋ ಬೆಳೆಯನ್ನು ಹೋಬಳಿವಾರು ಬೆಳೆ ವಿಮೆ ಯೋಜನೆಗೆ ಒಳಪಡಿಸಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ ಕುಂದಾಣ ಮತ್ತು ವಿಜಯಪುರ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಸಬಾ ಮತ್ತು ತೂಬಗೆರೆ, ಹೊಸಕೋಟೆ ತಾಲ್ಲೂಕಿನಲ್ಲಿ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಮತ್ತು ನಂದಗುಡಿ, ನೆಲಮಂಗಲ ತಾಲ್ಲೂಕಿನಲ್ಲಿ ಕಸಬಾ ಈ ಹೋಬಳಿಗಳಲ್ಲಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿರುತ್ತದೆ.

ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ವಿಮಾ ಕಂತಿನ ವಿವರಗಳು: ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 1,41,500
ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ(5%) ರೂ.ಗಳಲ್ಲಿ-7075
ವಿಮಾ ಕಂತು ನೊಂದಾಯಿಸಿಕೊಳ್ಳಲು ಕೊನೆಯ ದಿನ 2024ರ ಜುಲೈ 15 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು. ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಮಲ್ಲಿಕಾರ್ಜುನ ಬಾಬು- (ಮೊ) 9480461234, ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ 9606117615., ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- ದೀಪಾ ಎಂ. ಎಸ್.- 9880210892, ತಾಂತ್ರಿಕ ಸಹಾಯಕರು ಜ್ಯೋತಿ-9535412975. ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರೇಖಾ.ಬಿ.ಪಿ, (ಮೊ)8217210320, ತಾಂತ್ರಿಕ ಸಹಾಯಕ ಸೋಮಶೇಖರ್. -8453966868., ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹರೀಶ್ ಆರ್. (ಮೊ)9880461607, ತಾಂತ್ರಿಕ ಸಹಾಯಕ ವಿಜಯಕುಮಾರ್ -9902581832. ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *