ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳಿಂದ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿ ಹಾದುಹೋಗಿರುವ ನಗರದ ಡಿ.ಕ್ರಾಸ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವನಾಯಕ್, ಟೋಲ್ ನಿರ್ವಾಹಕರು ರಸ್ತೆ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದೇ ಈ ರಸ್ತೆಯಲ್ಲಿ ಸಂಚರಿಸುವ ಹಲವು ಮಂದಿ ವಾಹನಸವಾರರು ಹಾಗೂ ಪಾದಚಾರಿಗಳು ಸಾವು-ನೋವುಗಳನ್ನು ಅನುಭವಿಸುತ್ತಿದ್ದಾರೆ. ಅವೈಜ್ಞಾನಿಕವಾಗಿ ಡಿವೈಡರ್ ಮತ್ತು ಯು-ಟರ್ನ್‌ಗಳನ್ನು ಅಳವಡಿಸಿದ್ದು, ಪಾದಚಾರಿ ಮಾರ್ಗದ ಮೇಲೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶನೀಡಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.
ರಸ್ತೆಗಾಗಿ ಭೂಮಿ ನೀಡಿದ ರೈತರಿಗೆ ಐದು ವರ್ಷಕಳೆದರೂ ಸೂಕ್ತಪರಿಹಾರ ನೀಡಿಲ್ಲ. ಟೋಲ್ ಸಮೀಪದಲ್ಲಿ ಶೌಚಾಲಯ, ವಿದ್ಯುತ್‌ದೀಪ, ಸ್ವಚ್ಛತೆ ಸೇರಿ ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ. ಅಪಘಾತಗಳಾದಾಗ ಗಾಯಾಳುಗಳನ್ನು ಸಾಗಿಸಲು ಆಂಬುಲೆನ್ಸ್ ಮತ್ತು ಟೋಯಿಂಗ್ ವಾಹನದ ಸೌಲಭ್ಯಗಳಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ ನಂತರವಷ್ಟೇ ಟೋಲ್ ಸಂಗ್ರಹ ಮಡಬೇಕೆಂದು ಹಲವು ಬಾರಿ ಸೂಚಿಸಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸದೆ ಟೋಲ್ ಸಂಗ್ರಹ ಮಾಡಬಾರದು ಎಂದು ಆಗ್ರಹಿಸಿದರು.
ಜನರಿಂದ ತೆರಿಗೆ ವಸೂಲಿ ಮಾಡಿ ಸಾರ್ವಜನಿಕರಿಗೆ ವೈಜ್ಞಾನಿಕವಾಗಿ ರಸ್ತೆ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಇದನ್ನು ಪರಿಗಣಿಸದೆ ಯಾವುದೋ ಖಾಸಗಿ ಸಂಸ್ಥೆ ರಸ್ತೆ ನಿರ್ಮಾಣ ಮಾಡಿ ಸುಂಕ ವಸೂಲಿ ಮಾಡಲು ಬಿಟ್ಟು ನಮಗೂ ರಸ್ತೆಗೂ, ಸಾರ್ವಜನಿಕರ ಜೀವಕ್ಕೂ ಗೌರವ ಇಲ್ಲದಂತೆ ಸರ್ಕಾರಗಳು ಮರೆತು ಬಿಟ್ಟಿದೆ. ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಗರದಲ್ಲಿ ಕೈಗಾರಿಕೆಗಳಿಂದ ಜನಸಂಖ್ಯೆಯು ಹೆಚ್ಚಾಗುತ್ತಿರುವ ಕಾರಣ ವಾಹನಗಳ ದಟ್ಟಣೆ ಹೆಚ್ಚುತ್ತಿದೆ. ಇಲ್ಲಿ ಅವೈಜ್ಞಾನಿಕವಾಗಿ ಸಾರ್ವಜನಿಕರಿಂದ ಸುಂಕ ವಸೂಲಿ ಮಾಡಿ ತಮ್ಮ ಆದಾಯ ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಒಂದು ವಾರಕ್ಕೆ ಕನಿಷ್ಠ ಒಂದೆರಡು ಅಪಘಾತಗಳಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕರ ಹಕ್ಕೋತ್ತಾಯಗಳು:
1. ಸುಂಕ ಪಡೆಯುವ ರಸ್ತೆಗೆ ಸರ್ವಿಸ್ ರಸ್ತೆ ನಿರ್ಮಿಸಬೇಕು.
2. ರಸ್ತೆಯ ಮಧ್ಯ ಭಾಗದಲ್ಲಿ ಡಿವೈಡರ್ ಹಾಕಬೇಕು.
3. ಕೆಲವು ಸರ್ಕಲ್‌ಗಳಲ್ಲಿ ಅಂಡರ್ ಪಾಸ್ ಮತ್ತು ಮೇಲು ಸೇತುವೆ ನಿರ್ಮಾಣ ಮಾಡಬೇಕು.
4. ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ವಿಲೇವಾರಿ ಮಾಡುವುದನ್ನು ತಡೆಯುವುದು.
5. ರಸ್ತೆ ಪಕ್ಕದಲ್ಲಿ ಗಿಡಗಂಟಿಗಳು ಬೆಳೆಯದಂತೆ ಸ್ವಚ್ಛ ಮಾಡುವುದು.
6. ರಸ್ತೆ ಪಕ್ಕದಲ್ಲಿ ಖಾಸಗಿ ಜಾಹಿರಾತು ಫಲಕಗಳನ್ನು ಬೇಕಾಬಿಟ್ಟಿ ಹಾಕಿರುವುದನ್ನು ತೆಗೆಯಬೇಕು.
7. ಕೆಲವು ಭಾಗಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಸಬೇಕು.
8. ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯವರು ತಮಗೆ ಸಂಬಂಧಪಟ್ಟ ರಸ್ತೆಗಳ ಬದಿಯಲ್ಲಿರುವ ಕುರುಚಲು ಗಿಡಗಳನ್ನು ತೆಗೆಯುವುದು.
ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನಾ ನಿರತರನ್ನ ರಸ್ತೆಯಿಂದ ತೆರವು ಮಾಡಿ ಟೋಲ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುವ ಮೂಲಕ ಪ್ರತಿಭಟನೆ ಅಂತ್ಯಗೊಂಡಿತು.
ಈ ವೇಳೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ಕನ್ನಡ ಪಕ್ಷದ ಉಪಾಧ್ಯಕ್ಷ ಸಂಜೀವನಾಯಕ್, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಕರವೇ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಮತ್ತಿತ್ತರರು ಇದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…