Categories: ರಾಜ್ಯ

ಟ್ರಾಪ್ ಶೂಟಿಂಗ್ ನಲ್ಲಿ ಕಂಚಿನ ಪದಕ ಪಡೆದ ಎಂ. ರಾಜೇಶ್ ಜಯಸಿಂಹ: ಗಣ್ಯರಿಂದ ಅಭಿನಂದನೆ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಜಾಗೃತದಳದ ವಿಜಿಲೆನ್ಸ್ ಅಧಿಕಾರಿಗೆ 2023ನೇ ಸಾಲಿಗೆ ರಾಜ್ಯಮಟ್ಟದ ಟ್ರಾಪ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಲಭಿಸಿದೆ.

ಎಂ. ರಾಜೇಶ್ ಜಯಸಿಂಹ ರವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಜಾಗೃತದಳ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ರಾಜ್ಯಮಟ್ಟದ ಟ್ರಾಪ್ ಶೂಟಿಂಗ್‌ನ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಪಡೆದಿರುವುದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಮ್ಮೆಯ ವಿಷಯವಾಗಿರುತ್ತದೆ.

ಅಧಿಕಾರಿಯ ಕರ್ತವ್ಯಕ್ಕೆ ಮೆಚ್ಚಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ವೃಂದದವರು ಇವರಿಗೆ ಇನ್ನು ಹೆಚ್ಚಿನ ಸಾಧನೆ ಮಾಡಲು ಶುಭ ಹಾರೈಸಿ ಅಭಿನಂದಿಸಿರುತ್ತಾರೆ.

ಎಂ.ರಾಜೇಶ್ ಜಯಸಿಂಹ ಇವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಜಾಗೃತದಳ ಅಧಿಕಾರಿಯಾಗಿ ಅಧಿಕಾರವಹಿಸಿಕೊಂಡಾಗಿನಿಂದ ಕರ್ನಾಟಕ ರಾಜ್ಯದ್ಯಂತ ಪ್ರವಾಸ ಮಾಡಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳಿಗೆ ಭೇಟಿ ನೀಡಿ, ಕಚೇರಿಯ ತಪಾಸಣೆ ನಡೆಸಿ, ಫಲಾನುಭವಿಗಳನ್ನು ಭೇಟಿ ಮಾಡಿ, ಘಟಕಗಳ ಪರಿವೀಕ್ಷಣೆ ನಡೆಸಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಸಮಾಜದ ಕಟ್ಟಕಡೆಯ ಭೋವಿ ಜನಾಂಗದವರಿಗೆ ತಲುಪಿಸಿ ಅವರುಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯಶಸ್ವಿಯಾಗಿರುತ್ತಾರೆ.

ಇವರ ದೇಶ ಸೇವೆಗೆ ಮೆಚ್ಚಿ ಅನೇಕ ಪದವಿಗಳು, ಅವಾರ್ಡ್ ಗಳಿಗೆ ಭಾಜನರಾಗಿರುತ್ತಾರೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

8 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

14 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago