ಟ್ರಾಫಿಕ್ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ ಹಿನ್ನೆಲೆ: ರಿಯಾಯಿತಿಗೆ ವಾಹನ ಸವಾರರ ಉತ್ತಮ ಪ್ರತಿಕ್ರಿಯೆ: ಎರಡು ದಿನದಲ್ಲಿ 50ಲಕ್ಷ ದಂಡ ಸಂಗ್ರಹ

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ. ಬಾಕಿ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿರೋ ರಾಜ್ಯ ಸರ್ಕಾರ. ಈ ಹಿನ್ನೆಲೆ ರಿಯಾಯಿತಿಗೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳಲ್ಲಿ 15,980 ಕೇಸ್ ಗಳು ಕ್ಲಿಯರ್ ಆಗಿ, 50,71,850 ರೂ. ದಂಡ ಸಂಗ್ರಹವಾಗಿದೆ.

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಿರುವ ಸಾರಿಗೆ ಇಲಾಖೆ.

ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ.

Leave a Reply

Your email address will not be published. Required fields are marked *