ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ನ್ನು ಪೊಲೀಸರು ದಿಢೀರ್ ಅಡ್ಡಗಟ್ಟಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಈ ವೇಳೆ ಬೈಕ್ ನಲ್ಲಿದ್ದ ಮಗು ಕೆಳಗೆ ಜಾರಿ ಬಿದ್ದಿದ್ದು, ಮಗು ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಗಂಭೀರ ಪೆಟ್ಟಾಗಿ ಮಗು ಸಾವನ್ನಪ್ಪಿದೆ.
ಮಗುವಿನ ಸಾವಿಗೆ ಪೊಲೀಸರ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್ಐಗಳನ್ನು ಅಮಾನತು ಮಾಡಿದ್ದಾರೆ.
ಈ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಎಎಸ್ಐಗಳಾದ ಜಯರಾಮ್, ನಾಗರಾಜ್, ಗುರುದೇವ್ ಅಮಾನತುಗೊಂಡವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…