ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.
ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…