ನಟ ಡಾಲಿ ಧನಂಜಯ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು, ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಧನಂಜಯ್ ಪರಿಚಯಿಸಿದ್ದಾರೆ.
ಮುಂದಿನ ವರ್ಷ ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಧನಂಜಯ್ ಅವರು ವೈದ್ಯೆಯನ್ನು ಮದುವೆಯಾಗುತ್ತಿರುವುದನ್ನ ಖಚಿತಪಡಿಸಿದ್ದಾರೆ.
ಹುಡುಗಿಯ ಹೆಸರು ಧನ್ಯತಾ. ಸ್ತ್ರೀರೋಗ ತಜ್ಞೆ ಧನ್ಯತಾ ಮತ್ತು ಡಾಲಿ ಅನೇಕ ವರ್ಷಗಳಿಂದ ಪರಿಚಿತರು. ಇದೀಗ ಮನೆಯವರ ಒಪ್ಪಿಗೆ ಪಡೆದು ಹಸೆಮಣೆ ಏರಲು ಸಿದ್ಧವಾಗಿದ್ದಾರೆ.
ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನ ಅವರು ಹಂಚಿಕೊಂಡಿದ್ದಾರೆ. ಧನ್ಯತಾ ಚಿತ್ರದುರ್ಗ ಮೂಲದವರು. ಓದಿದ್ದು ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಧನಂಜಯ್ ಅವರು ಭಾವಿ ಪತ್ನಿಗೆ ಸುಂದರ ಸಾಲುಗಳನ್ನು ಕೂಡ ಬರೆದಿದ್ದಾರೆ.
ಪ್ರೀತಿಯ ಕರುನಾಡಿಗೆ,
ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.
ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು
ನಾನು ಧನ್ಯ ❤️
ಇಂತಿ ನಿಮ್ಮವ
ಧನಂಜಯ
ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…