ನಗರದ ಹೊರವಲಯದಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಡಾ.ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ, ಶಿಬಿರ ಕೇಂದ್ರದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಜೂನ್.4 ರಾತ್ರಿ ಸುಮಾರು ರಾತ್ರಿ 12ರಿಂದ 12.30ರ ಸುಮಾರಿಗೆ 75ಸಾವಿರ ಬೆಲೆ ಬಾಳುವ 4 ಟೆಂಟ್‌ಗಳು ಹಾಗೂ ಪ್ಯಾನಲ್ ಬೋರ್ಡ್ ಕಳ್ಳತನವಾಗಿದೆ ಎಂದು ಈ ಕೇಂದ್ರದಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದರಿಂದ ಸಂಸ್ಥೆಗೆ ನಷ್ಟವಾಗಿರುತ್ತದೆ. ಕೂಡಲೇ ಕಳ್ಳರನ್ನು ಪತ್ತೆ ಮಾಡಿ ಕಳುವಾದ ವಸ್ತುಗಳನ್ನು ಸಂಸ್ಥೆಗೆ ಒಪ್ಪಿಸಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…