ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ “ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.
ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ, ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.
ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕರಾದ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲರಾದ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…