ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ, ಕಾರ್ಯವೈಖರಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ “ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ, ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸುತ್ತಾ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಸರ್ಕಾರ ನಿರ್ಮಿಸಿದೆ. ಒಂದು ಶಾಲೆಯಲ್ಲಿ ಆಹಾರ, ಬಟ್ಟೆ, ವಸತಿ ಮೂಲಭೂತ ಸೌಕರ್ಯಗಳನ್ನು ಉಚಿತವಾಗಿ ಕಲ್ಪಿಸುವುದು ಅಂದರೆ ಅದು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಎಂದರು.

ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.

ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕರಾದ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲರಾದ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

7 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

4 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

6 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

8 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago