ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತೂಬಗೆರೆ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲ ಬಿಜೆಪಿ ಕಾರ್ಯದರ್ಶಿ ಪ್ರತಾಪ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಸುಧಾಕರ್ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಾ.. ಫಲಿತಾಂಶಕ್ಕಾಗಿ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರು ಮುಖಂಡರು ಮತ್ತು ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಕೃತಜ್ಞತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮಿಸುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಇದು ಜನರು ನೀಡಿದ ಗೆಲುವು ಎಂದು ಬಣ್ಣಿಸಿದರು.
ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ್ ಆರಾಧ್ಯ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಮುನಿಕೃಷ್ಣಪ್ಪ, ಮುಖಂಡರಾದ ಹರೀಶ್, ಕೃಷ್ಣಚಾರಿ, ದೇವರಾಜ್, ಗಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…