ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಇವರ ಜೊತೆಗೆ ಡಾ.ಜಿ ಪರಮೇಶ್ವರ್ ಅವರು ಇದ್ದರು.

ಈ ಕುರಿತು ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ “ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರು ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪರಮೇಶ್ವರ್ ಅವರು ನನ್ನನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಈ ವೇಳೆ ಇಬ್ಬರೂ ನಾಯಕರಿಗೆ ಅಭಿನಂದಿಸಿ, ಶುಭ ಹಾರೈಸಿದೆ” ಎಂದು ಬರೆದುಕೊಂಡಿದ್ದಾರೆ.

ಅಂದಹಾಗೆ ಉಪಮುಖ್ಯಮಂತ್ರಿ ಸ್ಥಾನವನ್ನು  ಜಿ.ಪರಮೇಶ್ವರ್ ಅವರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ…

Leave a Reply

Your email address will not be published. Required fields are marked *

error: Content is protected !!