ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಡಾ.ಬಾಬು ಜಗಜೀವನರಾಂ ಅವರ 37ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿ ಅವರು ಮಾತನಾಡಿದರು.
ಡಾ.ಜಗಜೀವನ ರಾಂ ಕಿರಿಯ ವಯಸ್ಸಿನಲ್ಲೇ ಕೇಂದ್ರ ಮಂತ್ರಿಯಾಗಿ ದೇಶದ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕಾರ್ಮಿಕ ಚಳುವಳಿ, ಸಂವಿಧಾನ ರಚನೆಯಲ್ಲೂ ಅವರ ಕೊಡುಗೆ ಇದೆ. ರಕ್ಷಣಾ ಮಂತ್ರಿಗಳಾಗಿ, ಕಾರ್ಮಿಕ ಮಂತ್ರಿಗಳಾಗಿ, ಕೃಷಿ ಮಂತ್ರಿಗಳಾಗಿ ದೇಶ ಸೇವೆ ಸಲ್ಲಿಸಿದ್ದಾರೆ. ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಬಣ್ಣಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಸಮುದಾಯದ ಮುಂಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…