ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನ- ಪಿ.ಗೋವಿಂದರಾಜು

ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ. ಅಂಬೇಡ್ಕರ್ ಚಿಂತನೆಗಳ ಪ್ರಭಾವ ಕನ್ನಡದ ದಲಿತ, ಬಂಡಾಯ, ಪ್ರಗತಿಪರ ಸಾಹಿತಿಗಳ ಮೇಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜಗತ್ತಿನ ಹಲವಾರು ದೇಶಗಳು ಪ್ರಶಂಸೆ ಮಾಡಿವೆ ಎಂದರು.

ಕನ್ನಡ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ಅಗ್ನಿವೆಂಕಟೇಶ ಮಾತನಾಡಿ, ನಮ್ಮ ದೇಶದ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರು ನಮಗೆ ಸಮಾನತೆಯ ಹಾದಿಯನ್ನು ತೋರಿಸಿದರು. ಜನಪರ ಹೋರಾಟಗಾರರಿಗೆ ಅಂಬೇಡ್ಕರ್ ಸದಾ ಸ್ಫೂರ್ತಿ. ಶೋಷಣೆ ಮುಕ್ತವಾದ ಸಮಾಜ ನಿಮಾರ್ಣವಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮಹತ್ವವನ್ನು ತಿಳಿಸಿದರು ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.

ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವೈಯಕ್ತಿಕ ಜೀವನಕ್ಕಿಂತ ದೇಶದ ಒಳಿತಿಗಾಗಿ ಬದುಕಿದ್ದವರು. ತಮ್ಮ ಅಪಾರ ಓದು ಮತ್ತು ಜ್ಞಾನಾರ್ಜನೆಯಿಂದಾಗಿ ಜಗತ್ತೇ ಮೆಚ್ಚುವಂತಹ ಸಂವಿಧಾನ ರಚಿಸಲು ಸಹಕಾರಿ ಆಯಿತು. ಶೋಷಿತ ಸಮುದಾಯಗಳಿಗೆ ಸಮಾನತೆಯ ಹಕ್ಕು ದೊರೆಯಲು ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮ‌ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಸಾ.ಲ.ಕಮಲನಾಥ್ , ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಹೋಬಳಿ ಘಟದ ಗೌರವ ಕಾರ್ಯದರ್ಶಿ ಮತ್ತು ಮುಖ್ಯಶಿಕ್ಷಕ ಅಂಜನಮೂರ್ತಿ, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜು, ದಲಿತ ವಿಮೋಚನಾ ಸೇನೆ ನಗರ ಅಧ್ಯಕ್ಷ ಮಧು, ಪ್ರಗತಿಪರ ಸಂಘಟನೆಯ ಅಬ್ದುಲ್ ಸುಹಾನ್ ಸಾಬ್, ಆರಿಫ್, ದರ್ಗಾಜೋಗಿಹಳ್ಳಿ ಮಲ್ಲೇಶ್ , ದಲಿತ ವಿಮೋಚನಾ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

8 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

16 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

20 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

23 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago