ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲು ಸಕಲ ಸಿದ್ಧತೆ ನಡೆಸಲಾಗಿದೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಮತದಾನ ಜಾಗೃತಿ ಜಾಥ ಮೂಲಕ ಆಚರಣೆ ಮಾಡಲಾಗುವುದು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 14ರಂದು ಬೆಳಿಗ್ಗೆ 7 ಗಂಟೆಗೆ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ಮತದಾರರಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದೆ.