ತಾಲೂಕಿನ ಮಧುರೆ ಹೋಬಳಿ ಕಾಡನೂರು ಗ್ರಾಮ ಪಂಚಾಯಿತಿಯ ಮದಗೊಂಡನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಧೀರಜ್ ಮುನಿರಾಜ್.
ಈ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ಕಳೆದ 25 ವರ್ಷಗಳ ಗ್ರಾಮಸ್ಥರ ಪ್ರಯತ್ನ ಜೊತೆಗೆ ವಿಧಾನಸಭಾ ಚುನಾವಣೆಗೂ ಮುಂಚೆ ಮಾತು ಕೊಟ್ಟಂತೆ ಧೀರಜ್ ಮುನಿರಾಜ್ ಮಂಜೂರು ಮಾಡಿಸಿದ್ದಾರೆ.
ಇಂದು ಚಿಕ್ಕಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಯೋಜನಾ ಪ್ರಾಧಿಕಾರದ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು.ಎನ್.ಆರ್, ಕಾಡನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ಗೋಪಾಲಕೃಷ್ಣಯ್ಯ, ಉಪಾಧ್ಯಕ್ಷೆ ಮಂಗಳಮ್ಮ ಮುನಿರಾಜು, ಗ್ರಾಮ ಪಂಚಾಯತಿ ಸದಸ್ಯ ಭೈರ ಹನುಮಗೌಡ, ಗ್ರಾಮದ ಮುಖಂಡ ಶ್ರೀನಿವಾಸ್ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.