ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.

ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ‌ಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.

ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಾಲೋನಿಯ ಗ್ರಾಮಸ್ಥರೊಂದಿಗೆ ವಿಚಾರಿಸಿ ಫೋಟೋ ಮತ್ತು ಮಾಹಿತಿ ಪಡೆದು ಹತ್ತಿರದಲ್ಲಿರುವ ಸಿಸಿಟಿವಿಗಳ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ.

ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.

ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

13 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

18 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago