Categories: ಕೋಲಾರ

ಡಾ.ಮನಮೋಹನ್ ಸಿಂಗ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ

ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.

ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು

ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.

Ramesh Babu

Journalist

Recent Posts

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

52 minutes ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

4 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

13 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

24 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago