ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಹೇಳಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ತಿಳಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಹೇಳಿದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

2 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

11 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 day ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

1 day ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago