ಡಿಕೆಶಿ ದೇಶದ ಎರಡನೇ ಅತ್ಯಂತ ಶ್ರೀಮಂತ ಶಾಸಕ: ಡಿಕೆಶಿ ಆಸ್ತಿ ಮೌಲ್ಯ ಎಷ್ಟು..? ಹಾಗಾದರೆ, ನಂ.1 ಶ್ರೀಮಂತ ಶಾಸಕ ಯಾರು…? ಇಲ್ಲಿದೆ ಮಾಹಿತಿ ಓದಿ…

ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.

ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

46 minutes ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

54 minutes ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

1 hour ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

3 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

4 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

18 hours ago