ಡಿಕ್ರಾಸ್ ಬಳಿ ಯುವಕನ ಕೊಲೆ: ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾದ ದುರುಳರು

 

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಭೀಕರವಾಗಿ ಯುವಕನ ಕೊಲೆಯಾಗಿದ್ದು, ಇಂದು ರಾತ್ರಿ ಸುಮಾರು 10:20ರ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಪವನ್ (28) ಯುವಕನ ಕೊಲೆಯಾಗಿದೆ, ಮೃತ ಯುವಕ ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ನಗರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ನಡೆದಿದೆ.. ಕೊಲೆಯಾದ ಯುವಕ ಖಾಸಗಿ ಕಂಪನಿಯಲ್ಲಿ ಬಸ್ ಡ್ರೈವರ್ ಆಗಿದ್ದ ಎನ್ನಲಾಗಿದೆ..
ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಬೆನ್ನತ್ತಿರುವುದಾಗಿ ಮಾಹಿತಿ ತಿಳಿದು ಬಂದಿದೆ. ನಗರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಚರ್ಚ್ ಪಕ್ಕದಲ್ಲೇ ಹಾದುಹೋಗಿರುವ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿ ಮಧ್ಯೆ ಇರುವ ಡಿವೈಡರ್ ನಲ್ಲಿ ಬಿಸಾಡಿ ಹೋಗಲಾಗಿದೆ….
ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

Leave a Reply

Your email address will not be published. Required fields are marked *

error: Content is protected !!