ನಿನ್ನೆ(ಡಿ.5) ರಾತ್ರಿ ಚರ್ಚ್ (ನಗರ ಪೊಲೀಸ್ ಠಾಣೆ) ಬಳಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಪವನ್ (28) ಯುವಕನ ಕೊಲೆಯಾದ ಯುವಕ. ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ.
ಘಟನೆ ವಿವರ
ಮೃತ ಯುವಕ ಪವನ್ ನಿನ್ನೆ ರಾತ್ರಿ ಸುಮಾರು 10:15ರ ಸಮಯದಲ್ಲಿ ಆಟೋ ಚಾಲನೆ ಮಾಡಿಕೊಂಡು ಡಿಕ್ರಾಸ್ ಕಡೆಯಿಂದ ಟಿಬಿ ವೃತ್ತದ ಕಡೆಗೆ ಬರುವ ವೇಳೆ ಚರ್ಚ್ ಬಳಿ ಆಟೋವನ್ನು ಹಿಂಬಾಲಿಸಿಕೊಂಡು ಬಂದ ಸ್ವಿಫ್ಟ್ ಕಾರೊಂದು ಅಡ್ಡಗಟ್ಟುತ್ತದೆ. ಆಟೋ ನಿಲ್ಲಿಸಿದ ತಕ್ಷಣ ಕಾರಿನಲ್ಲಿದ್ದ ನಾಲ್ಕು ಜನ ಗ್ಯಾಂಗ್ ಪವನ್ ನನ್ನು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೈ, ಎದೆಭಾಗ, ಮುಖ ಹಾಗೂ ದೇಹದ ಇತರೆ ಭಾಗಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ..
ರಕ್ತದ ಮಡುವಿನಲ್ಲಿ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯ ಡಿವೈಡರ್ ಮೇಲೆ ಪವನ್ ಮೃತ ದೇಹ ಬಿದ್ದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ಪಾಂಡುರಂಗ, ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಸದ್ಯ ಕೊಲೆ ಆರೋಪಿಗಳು ಪರಾರಿಯಾಗಿದ್ದು, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಬೆನ್ನತ್ತಿರುವುದಾಗಿ ಮಾಹಿತಿ ತಿಳಿದು ಬಂದಿದೆ….
ನಗರ ಪೊಲೀಸ್ ಠಾಣೆ ಹಾಗೂ ಡಿವೈಎಸ್ ಪಿ ಕಚೇರಿಯ ಕೂಗಳತೆ ದೂರದಲ್ಲಿರುವ ಚರ್ಚ್ ಪಕ್ಕದಲ್ಲೇ ಹಾದುಹೋಗಿರುವ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ….
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…….
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…