ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡುತ್ತಿರುವ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಕೇಸ್‌ನಲ್ಲಿ ಇವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಬೆಳಕಿಗೆ ಬಂದಿವೆ.
ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್ ಆಗಿದೆ.
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಈಗ ಹೊರಬಂದಿವೆ.
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿದೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…