ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮತ್ತು ಪ್ರತಿಭೆಗಾಗಿ ಡಿಜಿ ಎನ್.ಸಿ.ಸಿ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಜನರಲ್ ಗುರ್ಬಿರ್ ಪಾಲ್ ಸಿಂಗ್ ಅವರು ಜಿ.ಹಿತೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿಗಳ ಮಗನಾದ ಜಿ.ಹಿತೇಶ್ ದೆಹಲಿಯಲ್ಲಿ 2024 ನೇ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಜಿ.ಹಿತೇಶ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ. ಪ್ರಸ್ತುತ ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…