ಕಾರೊಂದು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ದೇವನಹಳ್ಳಿ-ದೊಡ್ಡಬಳ್ಳಾಪುರ ಹೆದ್ದಾರಿಯ ವಿಶ್ವನಾಥಪುರ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ಸ್ಥಳಕ್ಕೆ ವಿಶ್ವನಾಥಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ಯಿಯಲ್ಲಿ ಘಟನೆ ನಡೆದಿದೆ.