ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಈ ಅಪಘಾತ ಸಂಭವಿಸಿದೆ. ಹೊಂಡಾ ಸಿಟಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ-800 ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಶಿಡ್ಲಘಟ್ಟ ಮೂಲದ ವೆಂಕಟೇಶಪ್ಪ (75) ಎಂಬವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮುನಿಅಕ್ಕಯಮ್ಮ, ಮಾಲಾ ಹಾಗೂ ಪವನ್ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಘಟನೆ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…