ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ….- ಎಚ್ ಡಿಕೆ.

ಡಿಸಿಎಂ ಡಿಕೆ ಶಿವಕುಮಾರ್ ರವರೇ..
ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಮಂತ್ರಿ ಎಚ್ ಡಿಕೆ ಹೇಳಿದ್ದಾರೆ.

ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.

ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು..

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ..

ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು..

ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!??

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ?

ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ಹೇಳಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

8 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

11 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

13 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

16 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

17 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago