Categories: ಕೋಲಾರ

ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಳಿಗೆ, ರೈತರಿಗೆ ಸಾಲ ವಿತರಣೆಗೆ ರೈತ ಸಂಘದಿಂದ ಒತ್ತಾಯ

ಕೋಲಾರ:ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ ಬ್ಯಾಂಕಿನ ಚುನಾವಣೆ ನಡೆಸಿ ಮಹಿಳಾ ಸಂಘಗಳಿಗೆ ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಿ ಲಕ್ಷಾಂತರ ರೈತರ ಜೀವನಾಡಿ ಆಗಿರುವ ಬ್ಯಾಂಕ್‌ನ್ನು ಉಳಿಸಬೇಕೆಂದು ರೈತ ಸಂಘದಿಂದ ಬ್ಯಾಂಕ್ ಮುಂದೆ ತಲೆ ಮೇಲೆ ಕಲ್ಲು ಹೊತ್ತುಕೊಂಡು ಹೋರಾಟ ಮಾಡಿ ಉಪ ವಿಭಾಗಾಧಿಕಾರಿಗಳ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹೈಕೋರ್ಟ್ ನ್ಯಾಯಾಲಯವೂ ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಬ್ಯಾಂಕ್‌ಗೆ ಚುನಾವಣೆ ನಡೆಸಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಚುನಾವಣೆ ನಡೆಸದೆ ಜಿಲ್ಲಾಧಿಕಾರಿಗಳು ಚುನಾವಣೆ ದಿನಾಂಕವನ್ನು ನಿಗದಿಪಡಿಸಿ ಮತ್ತೆ ಮುಂದೂಡಲು ಕಾರಣವಾದರೂ ಏನೂ ಸಹಕಾರ ಬ್ಯಾಂಕ್ ಹಾಳು ಮಾಡಲು ಕಣ್ಣಿಗೆ ಕಾಣದ ಹಿತ ಶತ್ರುಗಳ ಕೈವಾಡ ನಡೆಯುತ್ತಿದೆಯೇ ಸಾಲ ನೀಡದ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಜೀವನಾಡಿಯಾಗಿದ್ದ ಸಹಕಾರ ಬ್ಯಾಂಕ್ ನಷ್ಟದಲ್ಲಿದ್ದ ಬ್ಯಾಂಕನ್ನು ೨೦೧೪ರಲ್ಲಿ ಅಧಿಕಾರಕ್ಕೆ ಬಂದು ಬ್ಯಾಲಹಳ್ಳಿ ಗೋವಿಂದಗೌಡರ ನೇತ್ರತ್ವದ ಆಡಳಿತ ಮಂಡಳಿಯು ಸುಧಾರಣೆ ಮಾಡಿ ರೈತರ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕ ಶಕ್ತಿ ತುಂಬಿದ್ದ ಬ್ಯಾಂಕ್‌ನ್ನು ದಿವಾಳಿ ಮಾಡಿ ಖಾಸಗಿ ಬ್ಯಾಂಕ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಆಡಳಿತ ಮಂಡಳಿ ವಿರುದ್ದ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ೧೦ ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ಇವಾಗ ೧೦ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನೂ? ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಠಿ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಯೇ? ಸರ್ಕಾರದ ತನಿಖಾ ವರದಿಯಲ್ಲಿ ೧ ಕೋಟಿ ೫೦ ಲಕ್ಷ ವ್ಯವಸ್ಥಾಪಕರು ದುರುಪಯೋಗ ಪಡಿಸಿಕೊಂಡಿರುವುದು ಸಾಭಿತಾಗಿದ್ದರೂ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಬ್ಯಾಂಕಿನ ಆಡಳಿಯ ಮಂಡಳಿಯ ಅವಧಿ ಮುಗಿದ ನಂತರ ಸರ್ಕಾರವು ಅಡಳಿತಾಧಿಕಾರಿಯನ್ನು ನೇಮಕ ಮಾಡಿದೆ, ಆದರೆ ಬಡವರಿಗೆ ಸಾಲ ಸೌಲಭ್ಯಗಳು ದೊರೆಯದೆ ಇರುವುದು ಖಾಸಗಿ ಕೇವಾದೇವಿದಾರರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದೆಂದು ಬ್ಯಾಂಕ್ ಅವ್ಯವಸ್ಥೆಯ ಗಂಭೀರ ಆರೋಪ ಮಾಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಆಡಳಿತ ಅವಧಿ ಮುಗಿನಂತರವಂತೂ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ, ಅಧಿಕಾರಿಗಳಿಗೆ ಹಣಕಾಸು ವಿಚಾರದಲ್ಲಿ ಗಂಭೀರತೆಯಿಲ್ಲದಂತಾಗಿದೆ. ಅವರೆಲ್ಲ ಸಂಬಂಳಕ್ಕೆ ಸಮೀತವಾಗಿದ್ದು, ಸುಮಾರು ವರ್ಷಗಳಿಂದ ಇಲ್ಲೆ ಟಿಕ್ಕಾಣಿ ಹೂಡಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಅವಧಿ ಮುಗಿದಿರುವ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು, ಆದರೆ ಜಿಲ್ಲೆಯ ಕೆಲ ರಾಜಕೀಯ ಪಟ್ಟಭದ್ರ ಶಕ್ತಿಗಳು ಬ್ಯಾಂಕಿನ ವಿಚಾರದಲ್ಲಿ ಮೂಗು ತೂರಿಸಿ, ರೈತರ, ಮಹಿಳೆಯರ ವಿಚಾರದಲ್ಲಿ ಚೆಲ್ಲಾಟವಾಡುತ್ತಿವೆ. ಒಂದು ಕಾಲದಲ್ಲಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಂಡು ರಾಜಕೀಯ ಮುಖಂಡರೆ ಬ್ಯಾಂಕ್ ವಿಚಾರದಲ್ಲಿ ಮುಳುವಾಗಿದ್ದಾರೆ, ಸರ್ಕಾರಕ್ಕೂ ರೈತರ ಹಿತಕ್ಕಿಂತ ರಾಜಕೀಯ ಮುಖಂಡರ ಹಿತವೇ ಮುಖ್ಯವಾಗಿದೆ, ತೀರ್ಮಾನ ಬದಲಾಯಿಸಿಕೊಂಡು ಕೂಡಲೇ ಚುನಾವಣೆ ನಡೆಸಿ ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಸಂಘಗಳಿಗೆ, ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಬೇಕು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು, ಹಗರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಲೆಕ್ಕ ಪರಿಶೋಧಕರಿಗೂ ಪತ್ರ ಬರೆಯಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ತಿಂಗಳ ಅಂತ್ಯದಲ್ಲಿ ಸಾಲ ವಿತರಣೆಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಹೋರಾಟದಲ್ಲಿ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ನರಸಿಂಹಯ್ಯ, ಕುವ್ವಣ್ಣ, ಅಶ್ವತಪ್ಪ, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ಮುಂತಾದವರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

11 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

21 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago