ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲಾಡಳಿತ ಭವನದಲ್ಲಿನ ವಿವಿಧ ಇಲಾಖೆಗಳ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯಪಾಲನೆ ಕುರಿತು ರಿಯಾಲಿಟಿ ಚೆಕ್ ನಡೆಸಿದರು.

ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ ಇಲಾಖೆ, ಭೂ ದಾಖಲೆಗಳ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿದರು.

ಇತ್ತೀಚೆಗೆ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ನೌಕರರಿಗೆ ‘ಕರ್ತವ್ಯ’ ಆಪ್ ಮೂಲಕ ಡಿಜಿಟಲ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಇದರಂತೆ ಬೆಳಗ್ಗೆ 10 ಗಂಟೆಯೊಳಗೆ ಲಾಗಿನ್ ಹಾಗೂ ಸಂಜೆ 5.30ಕ್ಕೆ ಲಾಗ್‌ಔಟ್ ಮಾಡಬೇಕು ಎಂದು ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗ್ಗೆ 10.30ರಿಂದ 11 ಗಂಟೆಯ ನಡುವೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆಯೇ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ, ತಡವಾಗಿ ಬಂದಿದ್ದರೆ ಕಾರಣವೇನು, ಕ್ಷೇತ್ರ ಕಾರ್ಯಕ್ಕೆ ತೆರಳಿದ್ದರೆ ಅದರ ವಿವರವನ್ನು ‘ಕರ್ತವ್ಯ’ ಆಪ್‌ನಲ್ಲಿ ದಾಖಲಿಸಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಿದರು.

ಪರಿಶೀಲನೆ ವೇಳೆ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳ ಕುರ್ಚಿಗಳು ಖಾಲಿ ಇರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ, ಎಲ್ಲರೂ ನಿಗದಿತ ಸಮಯಕ್ಕೆ ‘ಕರ್ತವ್ಯ’ ಆಪ್‌ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ನಿಯಮ ಉಲ್ಲಂಘಿಸಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಬ್ಬಂದಿಯಲ್ಲಿ ಆತಂಕ:

ಸೋಮವಾರದಂತೆ ಸಿಬ್ಬಂದಿ ಹಂತ ಹಂತವಾಗಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿ ಅನಿರೀಕ್ಷಿತವಾಗಿ ವಿವಿಧ ಇಲಾಖೆಗಳಿಗೆ ಭೇಟಿ ನೀಡಿರುವುದು ಸಿಬ್ಬಂದಿಯಲ್ಲಿ ಆತಂಕ ಮೂಡಿಸಿತು. ತಮ್ಮ ಕಚೇರಿಯಲ್ಲೇ ಜಿಲ್ಲಾಧಿಕಾರಿಯನ್ನು ಕಂಡ ಕೆಲ ಸಿಬ್ಬಂದಿ ಅಚ್ಚರಿ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಇಂತಹ ಅನಿರೀಕ್ಷಿತ ಪರಿಶೀಲನೆಗಳು ಅಧಿಕಾರಿಗಳ ಸಮಯಪಾಲನೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಸರಿಯಾಗಿ ನಡೆಯಲು ಸಹಕಾರಿಯಾಗಲಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

3 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

7 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

7 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

9 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

14 hours ago