ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಂಗಳೂರು ಗ್ರಾಮಾಂತರ, ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗೆ ಭರಿಸಬೇಕಾಗಿರುವ ನೀರಿನ ಕರ, ಆಸ್ತಿ ಕರ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಹಣ ವಸೂಲಾತಿ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ದಾಖಲಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ಧಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪರಿಹಾರದ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಾಂಶ ಪ್ರಕರಣಗಳು, ಕಾನೂನಿನ ಅನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳು ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಹಾಗೂ ದೇವನಹಳ್ಳಿಗೆ ಆನ್ ಲೈನ್/ ಪಿಡಿಯೋ ಕಾನ್ಸರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಜೊತೆಗೆ ನ್ಯಾಯಾಲಯಗಳಲ್ಲಿ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 13.12.2025 ರಂದು ಆಯಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತನ್ನು ಏರ್ಪಡಿಸಲಾಗಿದ್ದು, ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ, ಆನ್ ಲೈನ್/ವಿಡಿಯೋ ಕಾನ್ವರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಮತ್ತು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಮಾಡಿಕೊಂಡರೆ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಲೋಕ್ ಆದಾಲತ್ ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…