Categories: ಕೃಷಿ

ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.

ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

8 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

10 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

11 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago